ನಾವು ಯಾವುದೇ ರೌಡಿಗಳನ್ನು ಪ್ರೋತ್ಸಾಹಿಸಲ್ಲ – ಸಿಎಂ

0
10
BASAVARAJ BOMAI

ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ರೌಡಿಗಳನ್ನು ನಾವು ಬಿಜೆಪಿಗೆ ಸೇರಿಸಿಕೊಂಡಿಲ್ಲ. ರೌಡಿಗಳಿಗೆ ಪ್ರೋತ್ಸಾಹ ಕೂಡ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ನಾಯಕರು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ ಅವರ ಮನೆಗೆ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ರೌಡಿಗಳನ್ನೂ ಪ್ರೋತ್ಸಾಹ ಮಾಡಲ್ಲ. ಅವರಿಗೆ ಯಾವುದೇ ಅವಕಾಶಗಳನ್ನೂ ಕೊಡುವುದಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಇದು ಬಹಳ ಸ್ಪಷ್ಟವಾಗಿದ್ದು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

Previous articleಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಘಟಿಕೋತ್ಸವಕ್ಕೆ ಚಾಲನೆ
Next articleಗಡಿ ವಿವಾದ–ರಾಜ್ಯದ ನಿಲುವು ಸಂವಿಧಾನಬದ್ಧ: ಸಿಎಂ