ಬೆಂಗಳೂರು: ಜನೇವರಿ 16ರಂದು ಕರ್ನಾಟಕಕ್ಕೆ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿಯೂ ಮಹಿಳೆಯರು ತಮ್ಮ ಅನಿಸಿಕೆಗಳನ್ನು ಬರೆದು ಹಾಕಲು ಒಂದು ದೊಡ್ಡ ಬಾಕ್ಸ್‍ನ್ನು ಇಡಲಾಗುತ್ತದೆ. ನಾ ನಾಯಕಿ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಮಾಜಿ ಸಚಿವೆ ಉಮಾಶ್ರೀ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಕಾಂಗ್ರೆಸ್ ಮಹಿಳಾ ಮುಖಂಡರು ಸಭೆಯಲ್ಲಿ ಹಾಜರಿದ್ದರು.