ನೀರು ಸರಬರಾಜು ಘಟಕ ಜಲಾವೃತ: ಸಿಎಂ ಪರಿಶೀಲನೆ

0
19
ಸಿಎಂ ಬೊಮ್ಮಾಯಿ

ಬೆಂಗಳೂರು: ಅತಿ ಹೆಚ್ಚು ಮಳೆಯಿಂದ ಟಿ.ಕೆ. ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್‌ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದರು.
ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಮಳೆ ನೀರು ತುಂಬಿ ಹಾನಿಯಾಗಿರುವ ಹಿನ್ನೆಲೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಭೀಮೇಶ್ವರ ನದಿ ಉಕ್ಕಿ ಹರಿದಿದೆ. ನದಿ ನೀರು ಹೆಚ್ಚಾಗಿ ನೀರು ಸರಬರಾಜು ಘಟಕಕ್ಕೆ ನುಗ್ಗಿ ಬಹಳ ಹಾನಿಯಾಗಿದೆ. 75 ವರ್ಷದ ಬಳಿಕ ಈ ನದಿಯಲ್ಲಿ ಇಷ್ಟು ಪ್ರಮಾಣದ ನೀರು ಬಂದಿದೆ. 5 ಘಟಕಗಳ ಪೈಕಿ 2 ಪಂಪ್ ಹೌಸ್‌ಗಳಿಗೆ ನೀರು ನುಗ್ಗಿದೆ ಎಂದರು.
1,450 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್‌ಗಳಿದ್ದು, 550 ಮತ್ತು 350 ಎಂ.ಎಲ್.ಡಿ ಸಾಮರ್ಥ್ಯದ ಘಟಕಗಳಿದ್ದು,550 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್ ಗಳು ಈಗಾಗಲೇ ಕೆಲಸ ಮಾಡುತ್ತಿದ್ದು. ನೀರು ಬೆಂಗಳೂರಿಗೆ ನಿರಂತರವಾಗಿ ಸರಬರಾಜು ಆಗುತ್ತಿದೆ ಎಂದರು.
ನೀರು ತುಂಬಿದ ಎರಡು ಪಂಪ್ ಹೌಸ್ ಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಸ್ಟೇಜ್ 4 ಪಂಪ್ ಹೌಸ್‌ನಲ್ಲಿ 12 ಅಡಿ ನೀರು ಹೊರ ತೆಗೆಯಲಾಗಿದೆ, ಇನ್ನೂ 11 ಅಡಿ ನೀರು ತೆಗೆಯಬೇಕು. ಮಧ್ಯರಾತ್ರಿ ಅಥವಾ ನಾಳೆ ಬೆಳಿಗ್ಗೆ ಒಳಗೆ ಈ ಕಾರ್ಯ ಮುಗಿಯಲಿದೆ ಎಂದರು.

ಬಸವರಾಜ ಬೊಮ್ಮಾಯಿ
Previous articleಬಿಜೆಪಿಯ ಶೇ. 50ರಷ್ಟು ಲಿಂಗಾಯತ ಮತ ಕಾಂಗ್ರೆಸ್ಸಿಗೆ: ಎಂ.ಬಿ. ಪಾಟೀಲ
Next articleನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ: ಸಿಎಂ