ನ. 11ರಂದು ದಕ್ಷಿಣ ಭಾರತದ ಮೊದಲ ವಂದೇ ಭಾರತ ಎಕ್ಸ್‌ಪ್ರೆಸ್‌ಗೆ ಚಾಲನೆ: ಸಿಎಂ

0
17
VANDE MATRAM

ಬೆಂಗಳೂರು: ನವೆಂಬರ್ 11ರಂದು ಪ್ರಧಾನಿ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನವೆಂಬರ್ 11ರಂದು ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನ ಉದ್ಘಾಟನೆ ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಮತ್ತು ಚೆನ್ನೈ-ಮೈಸೂರು ನಡುವೆ, ದಕ್ಷಿಣ ಭಾರತದ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

Previous articleಕೊಡಗಿನಲ್ಲೂ ಆಫ್ರಿಕನ್‌ ಹಂದಿ ಜ್ವರ ಪತ್ತೆ
Next articleವಿಜಯಪುರ ಮಹಾನಗರ ಪಾಲಿಕೆಯ ಮೊದಲ ಚುನಾವಣೆಗೆ ಕ್ಷಣಗಣನೆ