ಪಂಚಮಸಾಲಿ ಮೀಸಲಾತಿ: ವಿಜಯಾನಂದ ಕಾಶಪ್ಪನವರ್ ರಾಜೀನಾಮೆ

0
10
ಕಾಶಪ್ಪನವರ

ಬೆಂಗಳೂರು: ಸರ್ಕಾರದ ಕ್ರಮದಿಂದಾಗಿ ಬೇಸರಗೊಂಡು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2D ಎಂಬ ಹೆಸರಿನಡಿ ಶೇ.7ರಷ್ಟು ಮೀಸಲಾತಿ ಘೋಷಣೆ ಮಾಡಿದೆ. ಈ ಮೀಸಲಾತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ನಾವು ಕೇಳಿದ್ದು ಶೇ.15ರಷ್ಟು ಮೀಸಲಾತಿ. ಆದರೆ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಮೀಸಲಾತಿ ಹೆಚ್ಚಿಸದೇ ಈಗ ಚುನಾವಣಾ ತಂತ್ರ ಎಂಬಂತೆ ಕೇವಲ 7ರಷ್ಟು ಮೀಸಲಾತಿ ನೀಡಿದೆ. ನಾವು ಹೇಳಿದಷ್ಟು ಮೀಸಲಾತಿ ನೀಡದಿದ್ದರೆ ಸರ್ಕಾರದ ಕ್ರಮವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಸರ್ಕಾರದ ಕ್ರಮದಿಂದಾಗಿ ಬೇಸರಗೊಂಡು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿದ್ದಂತೆ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.

Previous articleಅನರ್ಹಗೊಳಿಸುವ ಮೂಲಕ ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
Next articleಕೋಲಾರ ಕ್ಷೇತ್ರ ಹೈಕಮಾಂಡ್‌ ನಿರ್ಧಾರವೇ ಅಂತಿಮ