Home News ಪಂಚಮಸಾಲಿ ಮೀಸಲಾತಿ: ಸಿಎಂ ನಿವಾಸ ಎದುರು ಸತ್ಯಾಗ್ರಹದ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ: ಸಿಎಂ ನಿವಾಸ ಎದುರು ಸತ್ಯಾಗ್ರಹದ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಶಿಗ್ಗಾವಿಯ ಮುಖ್ಯಮಂತ್ರಿ ಬೊಮ್ಮಾಯಿಯವರ ನಿವಾಸದ ಎದುರು ಸೆಪ್ಟೆಂಬರ್ 20ರಂದು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಆಗಸ್ಟ್ 22ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡುವುದಾಗಿ ತಿಳಿಸಿದ್ದರು. ಆದರೆ, ಅವರು ಕೊಟ್ಟ ಮಾತು ತಪ್ಪಿದ್ದಾರೆ. ನಮ್ಮ ಸಮಾಜದ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಹೀಗಾಗಿ ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

Exit mobile version