ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

0
27
MANGALORE

ಉಳ್ಳಾಲ: ಠಾಣಾ ವ್ಯಾಪ್ತಿಯ ಪಿಲಾರು ಪಂಜಂದಾಯನ ದೈವಸ್ಥಾನದ ಬಳಿ ಮನೆಯ ಬೆಡ್ ರೂಮ್‌ನಲ್ಲಿ ಮಹಿಳೆಯೊಬ್ಬರ ಮೃತ ದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿಯ ಮೃತದೇಹ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪತಿ ತೋಟದ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ.
ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (೪೫) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (೫೫) ಆತ್ಮಹತ್ಯೆಗೈದವರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ ತಂದಿದ್ದರು. ಮದ್ಯಾಹ್ನ ೧೨ ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಪಕ್ಕದ ಮನೆಯವರಿಗೆ ವಿಚಾರಿಸಲು ತಿಳಿಸಿದ್ದು, ಪಕ್ಕದ ಮನೆಯವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಅವರು ಬೆಡ್ ರೂಮಿನ ಮಂಚದಲ್ಲಿ ಹೆಣವಾಗಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಪಕ್ಕದ ತೋಟದ ಮರದಲ್ಲಿ ಶಿವಾನಂದ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.
ಅವರು ಪೈಂಟರ್ ಕೆಲಸ ಮಾಡುತ್ತಿದ್ದ ಶಿವಾನಂದ ಪೂಜಾರಿ ಅವರು ಪತ್ನಿ ಜೊತೆ ವಿನಾಃ ಕಾರಣ ತಗಾದೆ ಎತ್ತಿ ಗಲಾಟೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಆತ ತನ್ನ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಅವರ ಪುತ್ರ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

Previous articleನಾಲ್ವರು ಪೊಲೀಸರ ಅಮಾನತು
Next articleಇಂದು ಎಫ್‌ಎಂಸಿಜಿ ಕಂಪನಿ-ಸರ್ಕಾರ ಒಡಂಬಡಿಕೆ: ಹರಿದು ಬರಲಿದೆ ಸಾವಿರಾರು ಕೋಟಿ ಬಂಡವಾಳ