Home ನಮ್ಮ ಜಿಲ್ಲೆ ಕಲಬುರಗಿ ಪರಿಷತ್ ವಿಪಕ್ಷ ಸ್ಥಾನ ನೀಡಲು ನಮೋಶಿ ಮನವಿ

ಪರಿಷತ್ ವಿಪಕ್ಷ ಸ್ಥಾನ ನೀಡಲು ನಮೋಶಿ ಮನವಿ

0

ಕಲಬುರಗಿ: ವಿಧಾನ ಸಭೆ ಮತ್ತು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಇನ್ನಿತರೆ ಸ್ಥಾನಗಳಿಗೆ ನೇಮಕ ಮಾಡುವಂತೆ ಕೋರಿ ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪನವರಿಗೆ ಭೇಟಿಯಾಗಿ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಇಲ್ಲಿಯವರೆಗೂ ಸಭಾಪತಿ, ಉಪ-ಸಭಾಪತಿ, ವಿರೋಧ ಪಕ್ಷದ ನಾಯಕ, ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಹುದ್ದೆಯನ್ನಾಗಲಿ ಯಾರೊಬ್ಬರಿಗೂ ನೀಡಿರುವುದಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟದ ಬಿಜೆಪಿ ಹಿರಿಯ ನಾಯಕರು ಹಾಗೂ 4 ಬಾರಿ ವಿಧಾನ ಪರಿಷತ್ ಸದಸ್ಯನಾಗಿರುವ ನನಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Exit mobile version