Home ನಮ್ಮ ಜಿಲ್ಲೆ ಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

ಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

0

ಬೆಳಗಾವಿ : ರಾಜ್ಯದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು ನಾಳೆ ಚುನಾವಣೆ ನಡೆಯಲಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಹೊರಟ್ಟಿ ಈ ಬಾರಿ ಚುನಾವಣೆಯಲ್ಲಿ ಗೆದ್ದಿದ್ದರು. ಬಿಜೆಪಿ ಸೇರಲು ಸಭಾಪತಿ ನೀಡುವ ಭರವಸೆಯನ್ನ ಬಿಜೆಪಿ ನಾಯಕರು ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಸಭಾಪತಿ ಸ್ಥಾನ ನೀಡಿ ಬಿಜೆಪಿ ಮಾತು ಉಳಿಸಿಕೊಂಡಿದೆ. ಬಹುಮತ ಇರುವ ಕಾರಣ ನಾಳೆ ನಡೆಯುವ ಚುನಾವಣೆಯಲ್ಲಿ ಹೊರಟ್ಟಿ ಅವರು ಅವಿರೋಧ ಆಯ್ಕೆ ಆಗಲಿದ್ದಾರೆ.

Exit mobile version