ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸರ್ಕಾರದಿಂದ ಮುಚ್ಚಿ ಹಾಕುವ ಪ್ರಯತ್ನ: ಎಚ್‌ಡಿಕೆ ಆರೋಪ

0
13

ಮುದಗಲ್: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ನಿಷ್ಪಕ್ಷಪಾತವಾಗಿ ಸರ್ಕಾರ ತನಿಖೆ ನಡೆಸುವುದಿಲ್ಲ. ತಾರ್ಕಿಕ ಅಂತ್ಯವೂ ಕಾಣುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಆರೋಪಿಸಿದರು.
ಮಂಗಳವಾರ ಜಿಲ್ಲೆಯ ಮುದಗಲ್ ಪಟ್ಟಣದ ಸಮೀಪ ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಆಗಮಿಸಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಡೆಯಿಂದ ನಿಷ್ಠಾವಂತ ವಿದ್ಯಾರ್ಥಿಗಳ ಅನ್ಯಾಯವಾಗುತ್ತಿದೆ ಎಂದು ದೂರಿದರು. ಯಾರು ಮಾಡದಂಥ ಸಾಧನೆ ಹಾಗೂ ತನಿಖೆಯನ್ನು ಸರ್ಕಾರ ಮಾಡುತ್ತಿದೆ ಎಂಬುವುದನ್ನು ಬಿಂಬಿಸಿಕೊಳ್ಳುತ್ತಿದೆ. ದಂಧೆಕೋರರ ಅಣತಿಯಂತೆ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಆಪಾದಿಸಿದರು. ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದ ಅನುದಾನವನ್ನು ಸದ್ಬಳಕೆ ಮಾಡಿಲ್ಲ. ಪ್ರತಿ ಹಳ್ಳಿಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇಂದಿನ ರಾಜ್ಯ ಸರ್ಕಾರದ ಆಡಳಿತದಿಂದ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಶ್ರೀಮಂತರಾಗಿದ್ದಾರೆ. ಪಂಚರತ್ನ ಯಾತ್ರೆಯಿಂದ ಬಡವ- ಶ್ರೀಮಂತರು ಎಂಬ ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು.

Previous articleಕಾಂಗ್ರೆಸ್‌ನದು ಸುಳ್ಳು, ಉಗ್ರಗಾಮಿಗಳ ಕಾರ್ಖಾನೆ
Next articleಸಹೋದರರ ವೈಮನಸ್ಸು : ಗುಂಡಿನ ದಾಳಿ