ಚಿಕ್ಕಮಗಳೂರು: ಸಾರ್ವಜನಿಕವಾಗಿ ಪಿಸ್ತೂಲ್ ಸಹಿತ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.
ಬೀರೂರು ಮೂಲದ ಸಮೀರ್ ಬಂಧಿತ ಆರೋಪಿ. ಬಂಧಿತನಿಂದ ಒಂದು ಲೋಡೆಡ್ ಪಿಸ್ತೂಲ್, ಹತ್ತು ಸಜೀವ ಗುಂಡುಗಳು, ಎರಡು ಚಾಕು, ಒಂದು ಡ್ರಾಗರ್, 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗಾಂಜಾ ವ್ಯಸನಿಯಾಗಿದ್ದ ಸಮೀರ್, ಕಳೆದ ರಾತ್ರಿ ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುತ್ತಿದ್ದ ಸಾರ್ವಜನಿಕ ರಿಗೆ ಬೆದರಿಕೆ ಹಾಕುತ್ತಿದ್ದ ಆತನನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.