ಪೊಲೀಸರು, ಕರವೇ ಕಾರ್ಯಕರ್ತರ ಮಧ್ಯೆ ವಾಗ್ವಾದ

0
19
Belagavi

ಬೆಳಗಾವಿ(ಹಿರೇಬಾಗೇವಾಡಿ): ಎಂಇಎಸ್‌ ಪುಂಡಾಟಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಏತನ್ಮಧ್ಯೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್‌ ಬಳಿ ಪೊಲೀಸರು ಕರವೇ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದಾಗ, ಪೊಲೀಸರು ಮತ್ತು ಕರವೇ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಕರವೇ ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Previous articleಜನರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ – ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
Next articleಸುಪಾರಿ ಕೊಲೆ: ಶವಕ್ಕಾಗಿ ನಾಲ್ಕು ತಂಡಗಳಲ್ಲಿ ಹುಡುಕಾಟ