Home ನಮ್ಮ ಜಿಲ್ಲೆ ಪ್ರಧಾನಿ ಮೋದಿ ವರ್ಸಸ್ ಖರ್ಗೆ

ಪ್ರಧಾನಿ ಮೋದಿ ವರ್ಸಸ್ ಖರ್ಗೆ

0

ಬೆಳಗಾವಿ: ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ನಾಯಕ ಸಿಕ್ಕಿರಲಿಲ್ಲ. ಮೈತ್ರಿಕೂಟ ‘ಇಂಡಿಯಾ’ದ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಆಗಿ ಘೋಷಣೆ ಮಾಡಿರುವುದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸರಿಸಮ ನಾಯಕರಾಗಿ ಬಿಂಬಿತರಾಗಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಕುರಿತು ಮಾತನಾಡಿ, ಪ್ರಧಾನಿ ಮೋದಿ ವರ್ಸಸ್ ಖರ್ಗೆ ಎಂಬುದು ಖಂಡಿತ ಪರಿಣಾಮ ಬೀರಲಿದೆ ಎಂದು ಭವಿಷ್ಯ ನುಡಿದರು.
ವಾರದೊಳಗೆ ಹೈಕಮಾಂಡ್‌ಗೆ ಅಭ್ಯರ್ಥಿಗಳ ಲಿಸ್ಟ್: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರ‍್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಪಡೆದು ಹೈಕಮಾಂಡ್‌ಗೆ ಸಲ್ಲಿಸಲಾಗುವುದು. ವಿಜಯಪುರಕ್ಕೂ ಹೋಗಿ ನಾಳೆ ಸಭೆ ನಡೆಸುತ್ತಿದ್ದು, ಎಲ್ಲ ಅರ್ಜಿಗಳನ್ನು ಒಟ್ಟಾರೆ ಸಲ್ಲಿಸಲಾಗುವುದು ಎಂದರು.

Exit mobile version