ಪ್ರಾರಂಭವಾಗದ, ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ

0
26

ಬೆಂಗಳೂರು: ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿದ್ದು, ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಈ ಸೂಚನೆ ನೀಡಿದರು.
2023ರ ಏಪ್ರಿಲ್‌ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ- 22304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602.37 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696.35 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ. ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಲು ಮುಖ್ಯಮಂತ್ರಿಗಳು ಸೂಚಿಸಿದರು.

Previous articleಕರ್ತವ್ಯ ಲೋಪ: ತಹಶೀಲ್ದಾರ್‌ ವಿರುದ್ಧ ಎಫ್‌ಐಆರ್
Next articleಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ರವರಿಗೆ ಅಧಿಕೃತ ಆಹ್ವಾನ