Home Advertisement
Home ನಮ್ಮ ಜಿಲ್ಲೆ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ

ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ

0
118

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಬುರಗಿ ವಾಯುನೆಲೆಯಿಂದ ವಿಡಿಯೊ ಕಾನ್ಫೆರೆನ್ಸ್ ಮೂಲಕ ಅಪೆಕ್ಸ್ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವರ್ಷದ 14ನೇ ಆವೃತ್ತಿಯ ಏರ್ ಶೋ ಪ್ರದರ್ಶನ ಫೆಬ್ರವರಿ 13ರಿಂದ 17ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಬುರಗಿ ವಾಯುನೆಲೆಯಿಂದ ವಿಡಿಯೊ ಕಾನ್ಫೆರೆನ್ಸ್ ಮೂಲಕ ಅಪೆಕ್ಸ್ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದಾರೆ. 1996ರಿಂದ ನಡೆಯುತ್ತಿರುವ ಏರೋ ಇಂಡಿಯಾ ಶೋವನ್ನು ಸತತ 13 ಆವೃತ್ತಿಗಳ ಕಾಲ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.