ಬಂಟ್ವಾಳದಲ್ಲಿ NIA ದಾಳಿ

0
15

ಮಂಗಳೂರು: ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವಾದವರ ಪತ್ತೆ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರಿನ ಮತ್ತು ಮೆಲ್ಕಾರ್ ನ ಸೈಬರ್ ಸೆಂಟರ್ ಗಳಿಗೂ ಎನ್ಐಎ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಕಲೆ ಹಾಕಿದ್ದಾರೆ ಎಂದು ಗೊತ್ತಾಗಿದೆ. ನಿರ್ದಿಷ್ಟವಾಗಿ ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಎನ್ಐಎ ಇನ್ನೂ ಬಹಿರಂಗಪಡಿಸಿಲ್ಲ.

Previous articleಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ರಮಾದ: ಬ್ಯಾರಲ್, ಪ್ಲಾಸ್ಟಿಕ್ ಗಿರಕಿ: ಪೈಲಟ್ ಜಾಣತನದಿಂದ ತಪ್ಪಿದ ದುರಂತ
Next articleಮಾಡಾಳ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ