ಮಂಗಳೂರು: ಸುಮಾರು ೮೦೦ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ.
ಎ.೫ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಈ ನಡುವೆ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಮುಸ್ಲಿಂ ವ್ಯಾಪಾರಿಗಳು ದೇವಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಇಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ನಿರಾಕರಿಸಿ ವ್ಯಾಪಾರಿಗಳನ್ನು ಹಿಂದೆ ಕಳುಹಿಸಲಾಗದೆ ಎಂದು ವ್ಯಾಪಾರಿಗಳು ದೂರಿದ್ದಾರೆ.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಿಂದುತ್ವ ಸಂಘಟನೆಗೆ ಸೇರಿದವರೆನ್ನಲಾದ ಕೆಲವರು ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿಯೊಂದನ್ನು ಸಲ್ಲಿಸಿದ್ದರು.
ಈ ಮನವಿಯಲ್ಲಿ “ಹಿಂದೂ ಧಾರ್ಮಿಕ ದತ್ತಿ ನಿಯಮ ೨೦೦೨ರಂತೆ ದೇವಸ್ಥಾನದ ಆವರಣದಲ್ಲಿ ಇತರ ಮತೀಯರು ವ್ಯಾಪಾರ ಮಾಡುವಂತಿಲ್ಲ. ಇಲಾಖೆಯ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಈ ಮನವಿಯನ್ನು ಮುಂದಿಟ್ಟು ಕೊಂಡುಬಪ್ಪನಾಡು ದೇವಸ್ಥಾನದ ಜಾತ್ರಾಮಹೊತ್ಸವದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.