ಬಸ್, ಕಾರು ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಂಭೀರ ಗಾಯ

0
22

ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleನಮ್ಮೂರ ಮಹಾತ್ಮೆ
Next articleಖಾಸಗಿ ಸಾರಿಗೆ ಸಮಸ್ಯೆಗಳ ಇತ್ಯರ್ಥದ ಶಕ್ತಿ ಪ್ರದರ್ಶಿಸಲಿ