ಬಸ್‌ ಪಲ್ಟಿ: 30 ಪ್ರಯಾಣಿಕರಿಗೆ ಗಾಯ

0
5

ಬೆಳಗಾವಿ: ಬ್ರೇಕ್ ಫೇಲ್‌ನಿಂದಾಗಿ ರಾಜಹಂಸ ಬಸ್‌ ಪಲ್ಟಿಯಾಗಿ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಈ ಘಟನೆ ನಡೆದಿದ್ದು, ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ ಬ್ರೇಕ್ ಫೇಲ್‌ ಆಗಿ, ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ, ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ 10 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous article28 ಕ್ಷೇತ್ರ ಗೆಲ್ಲುವಲ್ಲಿ ಯಶಸ್ವಿಯಾಗುತ್ತೇವೆ
Next articleಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದ ಕರಡಿ ಸಂಗಣ್ಣ