Home ನಮ್ಮ ಜಿಲ್ಲೆ ಕೊಪ್ಪಳ ಬಸ್-ಬೈಕ್ ಡಿಕ್ಕಿ: ಇಬ್ಬರು ಸಾವು

ಬಸ್-ಬೈಕ್ ಡಿಕ್ಕಿ: ಇಬ್ಬರು ಸಾವು

0

ಕೊಪ್ಪಳ: ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಉಪಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಲಬುರ್ಗಾ ತಾಲ್ಲೂಕಿನ ಹಿರೇವಡ್ರಕಲ್ಲ್ ಗ್ರಾಮದ ಶರಣಪ್ಪ ಅಗಸರ(32) ಮತ್ತು ಕಾಳಪ್ಪ ಸುಣಗಾರ(30) ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಸ್ಥಾನಕ್ಕೆ ಬಂದು ದರ್ಶನ ಪಡೆದು, ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version