ಬಿಎಸ್‌ವೈ ನೇತೃತ್ವದಲ್ಲಿ ಮಹತ್ವದ ಸಭೆ

0
12

ಬೆಂಗಳೂರು: ಜನವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಕೈಗೆತ್ತಿಕೊಳ್ಳಬೇಕಿರುವ ಹೋರಾಟಗಳು ಹಾಗೂ ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಪೂರ್ವಸಿದ್ಧತೆ ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು.

ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಈ ಸರ್ಕಾರವು ಬಹಳ ಕಡಿಮೆ ಸಮಯದಲ್ಲಿ ಜನರ ವಿಶ್ವಾಸವನ್ನು ಕಳೆದುಕೊಂಡು ಛೀಮಾರಿ ಹಾಕಿಸಿಕೊಂಡಿದೆ. ಜನ ವಿರೋಧಿ ನೀತಿ ಅನುಸರಿಸುತ್ತಿದೆ,

ಗಣೇಶ ಹಬ್ಬದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳ್ಳಲಿದೆ ಎಂದಿದ್ದಾರೆ.

Previous articleಹೋರಾಟಕ್ಕೆ ಮೈತ್ರಿ ಅನಿವಾರ್ಯ
Next articleನಲವತ್ತಲ್ಲಾ ನಾಲ್ಕ ಜನ ಶಾಸಕರನ್ನ ಕರಕೊಂಡ ಹೋಗ್ಲಿ