Home Advertisement
Home ನಮ್ಮ ಜಿಲ್ಲೆ ಚಿತ್ರದುರ್ಗ ಬಿಜೆಪಿಗೆ 140 ಸ್ಥಾನ: ಬಿಎಸ್‌ವೈ

ಬಿಜೆಪಿಗೆ 140 ಸ್ಥಾನ: ಬಿಎಸ್‌ವೈ

0
115
bsy

ಚಿತ್ರದುರ್ಗ: ರಾಜ್ಯದಲ್ಲಿ ನಿರೀಕ್ಷೆ ಮೀರಿ ಉತ್ತಮ ವಾತಾವರಣ ಇದೆ. 140 ಸ್ಥಾನ ಪಡೆದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹಿರಿಯೂರಲ್ಲಿ ಸೋಮವಾರ ರೋಡ್ ಶೋ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಾವೇ ಸಿಎಂ ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿಎಂ ಯಾರೆಂಬುದು ಪಕ್ಷ ತೀರ್ಮಾನಿಸುತ್ತದೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ಗೆ ಪರೋಕ್ಷವಾಗಿ ಚಾಟಿ ಬೀಸಿದರು. ದಾವಣಗೆರೆಗೆ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ ಎಂದರು.