ಬಿಜೆಪಿಯಲ್ಲಿ ಭಿನ್ನ ಮತವಿಲ್ಲ ; ಸಿಎಂ ಸ್ಪಷ್ಟನೆ

0
12

ಹುಬ್ಬಳ್ಳಿ : ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ. ಅಂತಹ ಚಟುವಟಿಕೆಗಳು ನಡೆದಿಲ್ಲ. ಬದಲಾಗಿ ರಾಜ್ಯವ್ಯಾಪಿ ಪಕ್ಷ ಸಂಘಟನೆ ಸದೃಢವಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಧ್ಯೆ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಚಟುವಟಿಕೆಗಳು ನಡೆದಿವೆ. ಕಿತ್ತೂರು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿರುವುದು ಪಕ್ಷದ ಸಂಘಟನೆ ಚಟುವಟಿಕೆ, ವಿಜಯ ಸಂಕಲ್ಪ ಅಭಿಯಾನಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಹೇಳಿದರು.

Previous articleಅಮಿತ್ ಶಾ ಭೇಟಿ ಮಾಡಿದ ರಾಜ್ಯ ಬಿಜೆಪಿ ಮುಖಂಡರು
Next articleಬಿವಿಬಿ ಅಮೃತ ಮಹೋತ್ಸವ ಆಚರಣೆ, ಕ್ರೀಡಾಂಗಣ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ