ಧಾರವಾಡ: ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರ ಅಗತ್ಯ ಅನುದಾನ ನೀಡುತ್ತಿಲ್ಲ ಎಂಬ ಬಿಜೆಪಿ ಶಾಸಕರ ಆರೋಪದಲ್ಲಿ ಹುರುಳಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರಕಾರ ಅನುದಾನ ನೀಡುತ್ತಿಲ್ಲ ಎಂಬ ಆರೋಪಕ್ಕೆ ಅವರು ಪ್ರೂಫ್ ನೀಡಬೇಕು. ಆರೋಪ ಮಾಡುವುದೇ ಬಿಜೆಪಿಯವರ ಕೆಲಸ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಎಲ್ಲ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಸಿಗಲಿದೆ. ನಮ್ಮ ಸರಕಾರ ಅಧಕಾರಕ್ಕೆ ಬಂದು 3 ತಿಂಗಳಾಗಿವೆ. ಮೂರು ತಿಂಗಳಲ್ಲಿ ಎಲ್ಲ ಕಾಮಗಾರಿಗಳು ಮುಗಿಯಲು ಸಾಧ್ಯವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಶೇ. 40 ಕಮೀಶನ್ ಆರೋಪ ಹೊತ್ತಿರುವ ಬಿಜೆಪಿ ಈಗ ಕಾಂಗ್ರೆಸ್ ಮೇಲೆ ಮಾಡಿರುವ ಶೇ. 40 ಕಮೀಶನ್ ಆರೋಪಕ್ಕೆ ಯಾವುದೇ ಆಧಾರವಿಲ್ಲ ಎಂದರು.