ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ: ಕಲ್ಲು ತೂರಾಟ, ಲಾಠಿ ಚಾರ್ಜ್

0
14

ಗದಗ: ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಪಾಟೀಲ ಹಾಗೂ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ, ಚಪ್ಪಲಿ ತೂರಾಟ ನಡೆದು ತೀವ್ರ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.
ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಎರಡು ಬಾರಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಕಾರು ಜಖಂಗೊಂಡಿದೆ. ಕಾರಿನ ಬ್ಯಾನೆಟ್ ಜಖಂಗೊಂಡು ಮುಂದಿನ ಗಾಜು ಒಡೆದಿದೆ.

Previous articleದುಡಿದವರು ಬೇರೆ, ಉಂಡವರು ಬೇರೆ
Next article200 ಕೋಟಿ ಆಸ್ತಿ, 38 ಕೆಜಿ ಚಿನ್ನ, 258 ಕೆಜಿ ಬೆಳ್ಳಿ