ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಯಡಿಯೂರಪ್ಪ

0
9
bsy

ಬೆಂಗಳೂರು: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಜನಬೆಂಬಲ ಸಿಗುತ್ತಿದೆ. ಬಿಜೆಪಿಯ ಜನ ಬೆಂಬಲ ನೋಡಿ ಕಾಂಗ್ರೆಸ್‌ನವರು ದಿಗ್ಭ್ರಾಂತರಾಗಿದ್ದಾರೆ” ಎಂದು ಅಭಿಪ್ರಾಯಪಟ್ಟರು.
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರುವುದು ಖಚಿತವಾಗಿದ್ದು, ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ, ಸಿಎಂ ಬೊಮ್ಮಾಯಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ರಾಜ್ಯದ ಜನರಿಗಾಗಿ ನಾನು ಹಲವು ಕಾರ್ಯಕ್ರಮ ಜಾರಿಗೆ ತಂದಿದ್ದೇನೆ. ಎರಡು-ಮೂರು ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಆರಂಭವಾಗುತ್ತೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಡೆಸುವೆ. ರಾಜ್ಯದಲ್ಲಿ 130 ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದರು. ಅಮಿತ್ ಶಾ ಇನ್ನೂ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ. “ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ನಾನು, ಬಿಜೆಪಿಯ ಎಲ್ಲ ಮುಖಂಡರು ಹಾಗೂ ಸಂಸದರು ಪ್ರವಾಸ ಮಾಡುತ್ತೇವೆ” ಎಂದು ಹೇಳಿದರು.

Previous articleಶಾಸಕ ಗೌರಿಶಂಕರ್‌ ಅನರ್ಹ: ಆದೇಶಕ್ಕೆ 30 ದಿನಗಳ ತಡೆ
Next articleತೆನೆ ಇಳಿಸಿ ಕೈ ಹಿಡಿದ ಶ್ರೀನಿವಾಸ್