ಬೆಂಗಳೂರು: ಇಂದು ಬೆಳಗ್ಗೆ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್ ಹೆಗ್ಡೆ, ಪ್ರಸಿದ್ದ್ ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ಮಾಡಿದ್ದಾರೆ. ರಾಜ್ಯದಲ್ಲಿ ಕೆಲವು ವರ್ಷಗಳ ಹಿಂದೆ ಬಿರುಗಾಳಿ ಎಬ್ಬಿಸಿದ್ದ ಬಿಟ್ ಕಾಯಿನ್ ಹಗರಣ ಈಗ ಮತ್ತೆ ಸದ್ದು ಮಾಡ್ತಿದೆ. ದೇಶಾದ್ಯಂತ ಸುದ್ದಿಯಾಗಿ ರಾಜ್ಯಕ್ಕೆ ಕೆಟ್ಟ ಹೆಸರು ತರಿಸಿದ್ದ ಹಗರಣಕ್ಕೆ ಮೋಕ್ಷ ಕೊಡಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಕರಣಕ್ಕೆ ಮತ್ತೆ ಜೀವ ನೀಡಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ, ಬಿಟ್ ಕಾಯಿನ್ ಹಗರಣದ ತನಿಖೆಗಾಗಿ ಡಿಜಿಪಿ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚಿಸಿತ್ತು.