ಬೆಂಗಳೂರ: ಸಂಪೂರ್ಣ ಆಟೋ ಬಂದ್

0
24

ಬೆಂಗಳೂರು: ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಸೋಮವಾರ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ಭಾನುವಾರ ಮಧ್ಯರಾತ್ರಿ 12 ರಿಂದ 24 ಗಂಟೆಗಳ ಕಾಲ ನಗರದಲ್ಲಿ ಆಟೋ ಸಂಚಾರ ಸ್ಥಗಿತಗೊಳ್ಳಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತೀರ್ಮಾನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್‍ಲೈನ್ ನೀಡಿ, ಆಟೋ ಚಾಲಕರು ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ.

Previous articleರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು
Next article7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ