Home ನಮ್ಮ ಜಿಲ್ಲೆ ಚಿಕ್ಕಮಗಳೂರು ಬೆಳೆ ಹಾನಿಗೆ ಬೇಸತ್ತು ನೇಣಿಗೆ ಶರಣಾದ ರೈತ

ಬೆಳೆ ಹಾನಿಗೆ ಬೇಸತ್ತು ನೇಣಿಗೆ ಶರಣಾದ ರೈತ

0

ಚಿಕ್ಕಮಗಳೂರು: ಮಳೆ ಕೈಕೊಟ್ಟು ಬೆಳೆ ನಾಶವಾದ ಹಿನ್ನೆಲೆಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಕಡೂರು ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಕೃಷ್ಣ ನಾಯ್ಕ್ ಎಂಬವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3 ಲಕ್ಷ ರೂ.ಗಳ ಸಾಲವನ್ನು ತೆಗೆದುಕೊಂಡು ತಮ್ಮ ಕೃಷಿ ಜಮೀನಿನಲ್ಲಿ ರಾಗಿ ಮತ್ತು ಜೋಳದ ಬೆಳೆಗಳನ್ನು ಬಿತ್ತನೆ ಮಾಡಿದ್ದರು ಆದರೆ, ಮಳೆಯ ಕೊರತೆಯಿಂದಾಗಿ ಬೆಳೆಗಳು ನಾಶವಾಗಿವೆ.
ಪರಿಣಾಮಗಳನ್ನು ಎದುರಿಸಲು ಸಾಧ್ಯವಾಗದೆ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲ್ಲೂಕು ಒಂದರಲ್ಲೇ ಕಳೆದ 40 ದಿನಗಳಲ್ಲಿ ಇದು ಐದನೇ ರೈತರ ಆತ್ಮಹತ್ಯೆ ಪ್ರಕರಣವಾಗಿದೆ. ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

Exit mobile version