ಬೋಸರಾಜುಗೆ ಒಲಿದ ಸಚಿವ ಸ್ಥಾನ

0
18

ರಾಯಚೂರು: ಎನ್.ಎಸ್.ಬೋಸರಾಜು ಕಳೆದ 32 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಪಕ್ಷನಿಷ್ಠೆಯನ್ನ ಗುರುತಿಸಿ ಈಗ ಕಾಂಗ್ರೆಸ್ ಹೈಕಮಾಂಡ್ ಮಂತ್ರಿ ಸ್ಥಾನ ನೀಡಿದ್ದಾರೆ. 2023ರಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆ‌ ಮಾಡಲು ಆಸಕ್ತಿ ಹೊಂದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನಿರಾಕರಿಸಿತ್ತು. ಆದರೂ ಸಹ ರಾಯಚೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಭರವಸೆ ಕೂಡ ಎನ್.ಎಸ್. ಬೋಸರಾಜು ಹೆಗಲಿಗೆ ಹೊತ್ತು ಎನ್.ಎಸ್. ಬೋಸರಾಜು ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ನಿಂತು ಪಕ್ಷ ಸಂಘಟನೆ ಮಾಡಿದ್ರು. ಬೋಸರಾಜು 1972-76ರಲ್ಲಿ ರಾಯಚೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 1985ರಲ್ಲಿ ಮಾನ್ವಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ 3700 ಮತಗಳಿಂದ ಸೋತಿದ್ದರು. ಆದರೆ, 1999 ಮತ್ತು 2004ರಲ್ಲಿ ಇದೇ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2014ರಲ್ಲಿ ಪರಿಷತ್​ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಹಾಲಿ ಶಾಸಕ, ವಿಧಾನ ಪರಿಷತ್​ ಸದಸ್ಯರಾಗದಿದ್ದರೂ ಎನ್​ಎಸ್ ಬೋಸರಾಜು ಸಚಿವ ಸ್ಥಾನ ಪಡೆದಿದ್ದಾರೆ. ಈ ಹಿಂದೆ ವಿಧಾನಸಭೆ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಆದರೆ, ಈ ಬಾರಿ ಪೈಪೋಟಿ ನಡುವೆಯೂ ಮಂತ್ರಿಗಿರಿ ಸಿಕ್ಕಿದೆ.

Previous articleನೂತನ ಸಚಿವರ ಪ್ರಮಾಣವಚನ
Next articleಸಚಿವಗಿರಿ ಜೊತೆಗೆ ಮನೆಗೆ ಮಹಾಲಕ್ಷ್ಮೀ