Home ನಮ್ಮ ಜಿಲ್ಲೆ ಧಾರವಾಡ ಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಬ್ಯಾರಿಕೇಡ್ ತಳ್ಳಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

0
112
KABBU

ಧಾರವಾಡ: ಕಬ್ಬು ಬೆಳೆಗಾರರ ಸಮಸ್ಯೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು‌.
ರೈತರ ಮುತ್ತಿಗೆ ತಡೆಯಲು ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿದ್ದರು. ಆದರೆ, ಅವುಗಳನ್ನು ಕಿತ್ತು ಹಾಕಿದ ರೈತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಸರಕಾರ ಮತ್ತು ಸಕ್ಕರೆ ಸಚಿವರ ವಿರುದ್ಧ ಘೋಷಣೆ ಕೂಗಿದ ರೈತರು ಜಿಲ್ಲಾಡಳಿತದ ಆವರಣದಲ್ಲಿ ಹಸಿರು ಟಾವೆಲ್ ಹಾರಿಸಿ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದರು.