ಭೀಕರ ಅಪಘಾತ: ಮಗು ಸೇರಿ ಇಬ್ಬರ ಸಾವು

0
15

ಚಿಕ್ಕಮಗಳೂರು: ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ, ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ. ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಯೋಗಿಕೊಳ್ಳದ ಬಳಿ ಉಪಹಾರ ಸವಿದು ರಿಲಾಕ್ಸ್ ಆದ ಸತೀಶ ಜಾರಕಿಹೊಳಿ
Next articleಮತದಾನ ಮುಗಿದ ಬೆನ್ನಲ್ಲೇ ರಿಲ್ಯಾಕ್ಸ್​ ಮೂಡ್​ನಲ್ಲಿ ಪೇಡಾ ನಗರಿಯ ಅಭ್ಯರ್ಥಿಗಳು