Home ನಮ್ಮ ಜಿಲ್ಲೆ `ಭ್ರಷ್ಟಾಚಾರ ಆರೋಪಕ್ಕೆ ಜನರಿಂದಲೇ ಉತ್ತರ’

`ಭ್ರಷ್ಟಾಚಾರ ಆರೋಪಕ್ಕೆ ಜನರಿಂದಲೇ ಉತ್ತರ’

0
cc patil

ಬಾಗಲಕೋಟೆ: ಭ್ರಷ್ಟಾಚಾರದ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ, ಪ್ರತ್ಯಾರೋಪಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರೇ ತಾರ್ಕಿಕ ಅಂತ್ಯ ಮಾಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರೆಯುವುದು ನಿಶ್ಚಿತ. ಅದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಈಗಲೇ, ಇಂಥ ದಿನದಂದೇ ಎಂದು ಹೇಳಲು ಸಾಧ್ಯವಿಲ್ಲ. ಬೊಮ್ಮಾಯಿ ಸರ್ಕಾರ ಅದಕ್ಕೆ ಬದ್ಧವಾಗಿದೆ ಎಂದರು.

Exit mobile version