ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು ಎಂದು ಬೊಮ್ಮಾಯಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಅಧಿಕಾರದಿಂದ ಮುಕ್ತಿಗೊಳಿಸಲಾಗಿದೆ. ಪ್ರಸ್ತುತ ಯಾರನ್ನೂ ಮಂಡ್ಯ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಬದಲಾಯಿಸಲಾಗಿದ್ದು, ಇನ್ನು ಯಾರನ್ನೂ ನೇಮಕ ಮಾಡಿಲ್ಲ ಎಂದು ಹೇಳಿದ್ದಾರೆ.