Home ನಮ್ಮ ಜಿಲ್ಲೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ

0

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತಿ ಉತ್ಸವದ ಅಂಗವಾಗಿ ತಿರುಪತಿ ತಿರುಮಲ ದೇವಸ್ಥಾನದಿಂದ ಬಂದ ಶ್ರೀ ವೆಂಕಟೇಶ್ವರ ದೇವರ ಶೇಷವಸ್ತ್ರಗಳನ್ನು ಅದ್ದೂರಿಯಾಗಿ ಶ್ರೀ ಮಠದ ಮುಖ್ಯಧ್ವಾರದಿಂದ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.
ಮೊದಲಿಗೆ ಗ್ರಾಮದೇವತೆ ಶ್ರೀ ಮಂಚಾಲಮ್ಮದೇವಿಯ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ. ನಂತರ ಶ್ರೀಮಠದ ಪ್ರಾಕಾರದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ವೆಂಕಟೇಶ್ವರ ದೇವರ ಶೇಷವಸ್ತ್ರಗಳನ್ನು ತಲೆ ಮೇಲೆ ಇರಿಸಿಕೊಂಡು ಪ್ರದಕ್ಷಣೆ ಹಾಕಿ ಶ್ರೀ ರಾಯರ ಮೂಲಬೃಂದಾವಕ್ಕೆ ಸಮರ್ಪಣೆ ಮಾಡಿದರು. ಸನ್ನಿಧಿ ಮಂತ್ರಾಲಯದಲ್ಲಿ ಚೆನ್ನೈನ ರಾಘವೇಂದ್ರ ನಾದಹಾರ ಸೇವಾ ಟ್ರಸ್ಟ್ ನ ನೂರಾರು ಭಕ್ತರಿಂದ ಪ್ರತೀವರ್ಷದಂತೆ ನಾದಹಾರ ಸೇವೆ ನಡೆಯುತ್ತಿದೆ. ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯದವು. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿದರು.

Exit mobile version