ಮತದಾರರಿಗೆ ಫೋಟೋವುಳ್ಳ ಕುಕ್ಕರ್: ಸಮಗ್ರ ತನಿಖೆ

0
22

ಬೆಂಗಳೂರು: ಕಾಂಗ್ರೆಸ್‌ನ ನಾಲ್ಕೈದು ಶಾಸಕರು ಅವರ ಚಿತ್ರವುಳ್ಳ ಕುಕ್ಕರ್ ಮತದಾರರಿಗೆ ಕೊಟ್ಟಿರುವುದು ಸಾಕ್ಷಿ ಸಮೇತ ದೊರೆತಿದೆ. ಕುಣಿಗಲ್ ನಲ್ಲಿ ಸಿಕ್ಕು ವಾಣಿಜ್ಯ ತೆರಿಗೆ ಇಲಾಖೆಯವರು ಹಿಡಿದು ನಾಲ್ಕು ಜನರಿಗೆ ದಂಡ ವಿಧಿಸಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದು ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್‌ನವರು ತಮ್ಮ ಎಲೆಯಲ್ಲಿ ಇಷ್ಟೆಲ್ಲಾ ಇಟ್ಟುಕೊಂಡು ಜನರಲ್ಲಿ ಗೊಂದಲ ಉಂಟು ಮಾಡುವಷ್ಟು ತಳಮಟ್ಟಕ್ಕೆ ಇಳಿದಿದ್ದಾರೆ. ಸೋಲುತ್ತೇವೆ ಎನ್ನುವುದು ಅವರಿಗೆ ಗ್ಯಾರಂಟಿ ಆಗಿದೆ. ಹೀಗಾಗಿ ಈ ರೀತಿ ದೂರು ನೀಡುವುದು ಮಾಡುತ್ತಿದ್ದಾರೆ. ಪೊಲೀಸ್ ಹಾಗೂ ಕಾನೂನು ಇದೆ. ಕಾನೂನಿನ ಪ್ರಕಾರ ಕ್ರಮವಾಗಲಿ. ಈ ರೀತಿಯ ನೂರು ದೂರುಗಳನ್ನು ನಾವು ಅವರ ಮೇಲೆ ನೀಡಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನರಿಗೂ ಗೊತ್ತಿದೆ. ಇವರಿಂದ ನಾವು ಪಾಠ ಕಲಿಯಬೇಕಿಲ್ಲ. ಅವರು ಏನು ಮಾಡುತ್ತಾರೋ ಮಾಡಲಿ ಎಂದರು.

Previous articleಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್
Next articleಹಾವೇರಿಯ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ಕೊಟ್ಟಿದ್ದು ಬಿಜೆಪಿ: ಬೊಮ್ಮಾಯಿ