Home ನಮ್ಮ ಜಿಲ್ಲೆ ದಾವಣಗೆರೆ ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಸಂವಿಧಾನಕ್ಕೆ ವಿರುದ್ಧ

ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಸಂವಿಧಾನಕ್ಕೆ ವಿರುದ್ಧ

0

ದಾವಣಗೆರೆ: ಇತ್ತೀಚಿಗೆ ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅವ್ಯವಹಾರ ಸಂವಿಧಾನಕ್ಕೆ ಮತ್ತು ರಾಷ್ಟ್ರದ ಕಾನೂನಿಗೆ ವಿರುದ್ಧವಾಗಿದೆ ಎಂದು ನಿವೃತ್ತ ನ್ಯಾ. ಸಂತೋಷ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಒಂದು ಸ್ವತಂತ್ರ ಸಂಸ್ಥೆ. ಆಯೋಗದಲ್ಲಿ ಇಂತಹ ಅವ್ಯವಹಾರ ನಡೆಯುತ್ತಿರುವುದು ಪ್ರಜಾಪ್ರಭುತ್ವ ಎಲ್ಲಿಗೆ ಹೋಗಿದೆ ಅನ್ನುವುದು ಅನುಮಾನ ಮೂಡುತ್ತದೆ ಎಂದು ವಿಷಾದಿಸಿದರು. ಇತ್ತೀಚಿಗೆ ರಾಜಕೀಯಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್ ಅಧಿಕಾರಿಗಳು, ಗೂಂಡಾಗಳು ಬರುತ್ತಿರುವುದು ರಾಜಕೀಯದಲ್ಲಿರೋ ಸಂಪಾದನೆ ಬೇರೆಲ್ಲೂ ಇಲ್ಲ ಅನಿಸುತ್ತದೆ. ಆದ್ದರಿಂದ, ಈ ವ್ಯವಸ್ಥೆಯಲ್ಲಿ ಕೆಲ ಸುಧಾರಣೆಗಳು ಆಗಬೇಕು ಎಂದು ಅಭಿಪ್ರಾಯಿಸಿದರು.

Exit mobile version