Home ನಮ್ಮ ಜಿಲ್ಲೆ ದಾವಣಗೆರೆ ಮರಳು ದಂಧೆ:ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡ ಖಾದರ್

ಮರಳು ದಂಧೆ:ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡ ಖಾದರ್

0
ಮರಳು

ಮಂಗಳೂರು: ಅಕ್ರಮ ಮರಳು ದಂಧೆಕೋರರ ಬೆಂಬಲಿಸುವ ಉಳ್ಳಾಲ ಠಾಣೆಯ ಪೊಲೀಸರಿಗೆ ಖಾದರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆ ವಿರುದ್ದ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಖಾದರ್ ಎದುರು ವ್ಯಕ್ತಿಯೊಬ್ಬರು ಕಣ್ಣೀರಿಟ್ಟಿದ್ದಾರೆ. ಮರಳು ದಂಧೆಯಿಂದ ಮನೆಗೂ ಹಾನಿಯಾಗ್ತಿದೆ ಅಂತ ಖಾದರ್ ಎದುರು ಕಣ್ಣೀರಿಟ್ಟು ಅಳಲು ತೋಡಿಕೊಂಡಿದ್ದಾರೆ. ಮಂಗಳೂರು ಹೊರವಲಯದ ರಾಣಿಪುರ ನಿವಾಸಿಯೊಬ್ಬರು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಆಕ್ರೋಶಗೊಂಡ ಖಾದರ್, ತಕ್ಷಣ ಫೋನ್ ಮಾಡಿ ಉಳ್ಳಾಲ ಇನ್ಸ್‌ಪೆಕ್ಟರ್ ಸಂದೀಪ್ ಮತ್ತು ಎಸಿಪಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Exit mobile version