ಬೆಳಗಾವಿ: ಮಹದಾಯಿ ವಿವಾದ ಬಗೆಹರಿಸಿದ್ದು ನಮ್ಮದೇ ಸರ್ಕಾರ; ಶೀಘ್ರವೇ ಕಾಮಗಾರಿ ಕೈಗೊಳ್ಳಲು ವ್ಯವಸ್ಥೆ ಮಾಡಿದ್ದೇವೆ ಎಂದು ಬೆಳಗಾವಿಯ ಎಂ.ಕೆ. ಹುಬ್ಬಳ್ಳಿಯ ಜನ ಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಹೇಳಿದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕರ್ನಾಟಕಕ್ಕೆ ಒಂದೇ ಒಂದು ಹನಿ ಮಹದಾಯಿ ನದಿ ನೀರನ್ನು ಕೊಡುವುದಿಲ್ಲ ಎಂದು ಹೇಳಿದ್ದನ್ನು ನೆನಪಿಸಿದ ಅವರು, ಗೋವಾ ಹಾಗೂ ಕರ್ನಾಟಕ ಸರ್ಕಾರದ ನಡುವೆ ಬಹಳ ಕಾಲದಿಂದ ಬಾಕಿ ಉಳಿದಿದ್ದ ಮಹದಾಯಿ ಬಿಕ್ಕಟ್ಟನ್ನು ಮಧ್ಯಸ್ಥಿಕೆ ವಹಿಸಿ ಬಗೆಹರಿಸಿದ್ದೇವೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಳೆದ ಡಿಸೆಂಬರ್‌ನಲ್ಲಷ್ಟೇ ಮಹದಾಯಿ ಅಧಿಸೂಚನೆ ಪ್ರಕಟವಾಗಿದ್ದನ್ನು ಸದನದಲ್ಲಿ ಘೋಷಿಸಿದ್ದ ನಂತರದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಿಜೆಪಿ ನಾಯಕರು ಬಹಿರಂಗ ಪ್ರತಿಕ್ರಿಯೆ ನೀಡಿರುವುದು ಗಮನ ಸೆಳೆದಿದೆ.