ಮಹಿಳೆಗೆ ಕಪಾಳಮೋಕ್ಷ: ಸಚಿವ ಸೋಮಣ್ಣ ವಿರುದ್ಧ ದೂರು

0
15
V somanna

ಮಹಿಳೆಗೆ ಕಪಾಳಮೋಕ್ಷ ಮಾಡಿದ್ದ ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಅ.23ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನೆರವು ಕೇಳಿಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದರು. ಈ ಪ್ರಕರಣ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್​ ಪ್ರಚಾರ ಸಮಿತಿಯಿಂದ ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಸಚಿವರು ಮಹಿಳೆಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಕೂಡಾ ವೈರಲ್‌ ಆಗಿತ್ತು. ಅದೇ ದಿನ ಸಚಿವರು ಮಾತನಾಡಿ, ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರು ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆ ಕೇಳಿದ್ದರು. ಅಲ್ಲದೇ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ ಎಂದು ತಿಳಿಸಿದ್ದರು.

Previous articleತಮಿಳು ಚಿತ್ರ ನಿರ್ಮಾಪಕರಾಗಿ ಧೋನಿ
Next articleಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಪತ್ತೆ