ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ

0
9


ಚಿಕ್ಕಮಗಳೂರು : ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ (87 ವರ್ಷ) ಮಂಗಳವಾರ ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

Previous articleಎಫ್ ಡಿಎ ಪರೀಕ್ಷೆ ಅಕ್ರಮ: ಮೊಬೈಲ್ ಬಳಕೆ ಬಗ್ಗೆ ಎಫ್ ಐಎಸ್ ಎಲ್ ಗೆ ರವಾನೆ
Next articleಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ!