ಮಾಯಕೊಂಡ ಕ್ಷೇತ್ರಕ್ಕೆ ಆಕಾಂಕ್ಷಿಗಳ ದಂಡಿದೆ: ಶಾಸಕ ಶಿವಶಂಕರಪ್ಪ

ಶಿವಶಂಕರಪ್ಪ

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಯಕೊಂಡ ಕ್ಷೇತ್ರ ಒಂದರಲ್ಲೇ ೧೫-೨೦ ಜನ ಆಕಾಂಕ್ಷಿಗಳಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ದಕ್ಷಿಣದಿಂದ ತಾವೊಬ್ಬರೇ ಅರ್ಜಿ ಹಾಕಿದ್ದು ದಾವಣಗೆರೆ ಉತ್ತರ ಸೇರಿ ಇತರ ಕ್ಷೇತ್ರಗಳ ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಬೇಕಿದೆ ಎಂದು ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದರಿಂದ ಸಂಘಟನೆಗೆ ಯಾವ ರೀತಿ ಅನುಕೂಲವಾಗುತ್ತದೆ ಎಂಬ ಪ್ರಶ್ನೆಗೆ, ಇತ್ತೀಚೆಗಷ್ಟೇ ಜವಾಬ್ದಾರಿ ವಹಿಸಿಕೊಂಡಿದ್ದಾರೆ, ಕಾದು ನೋಡೋಣ ಎಂದರು.