Home ನಮ್ಮ ಜಿಲ್ಲೆ ಮೀಸಲಾತಿ ಆದೇಶ ತಿರಸ್ಕಾರ

ಮೀಸಲಾತಿ ಆದೇಶ ತಿರಸ್ಕಾರ

0

ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಕಾರ್ಯಕಾರಣಿ ಸಭೆಯನ್ನು ಮಾಡಿದ ಪಂಚಮಸಾಲಿ ಮುಖಂಡರು ಮಾ. 27 ರಂದು ಸರ್ಕಾರದ ಸುತ್ತೋಲೆ ಬಗ್ಗೆ ಚರ್ಚೆ ವೇಳೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು.ಮುಂದೆ ಸರ್ಕಾರ ಬದಲಾದಾಗ ನಮಗೆ ನ್ಯಾಯ ಸಿಗುತ್ತದೆ. ಕಳೆದ ಎರಡೂವರೆ ವರ್ಷಗಳಿಂದ ಹೋರಾಟ ಮಾಡಿದ್ರು ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ. ಮಾ.27ರಂದು ಒಂದೇ ಬಾರಿಗೆ 2 ಸುತ್ತೋಲೆ ಹೊರಡಿಸಿದ್ದಾರೆ. 2ಡಿ ಮೀಸಲಾತಿಯಲ್ಲಿ 52 ಜಾತಿಗಳಿವೆ ಎಲ್ಲರಿಗೂ ಸೇರಿಸಿ ಘೋಷಣೆ ಮಾಡಿದ್ದಾರೆ ಎಂದರು.

Exit mobile version