Home ನಮ್ಮ ಜಿಲ್ಲೆ ಧಾರವಾಡ ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು

ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು

0

ಹುಬ್ಬಳ್ಳಿ : ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ಯಾರು ಹೇಳಿದ್ದು? ಅವರನ್ನೇ ಕೇಳಿ. ನಾನು ಹೈಕಮಾಂಡ್‌ನಲ್ಲಿರುವ ವ್ಯಕ್ತಿ. ಮುಖ್ಯಮಂತ್ರಿ ಬದಲಾವಣೆ ನಿರ್ಧಾರ ಏನಿದ್ದರೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಆಹಾರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮರ್ಥ ಆಡಳಿತಗಾರರಾಗಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದಿದ್ದಾರೆ. ಸರ್ಕಾರವನ್ನು ಸುಭದ್ರವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ರಾಜ್ಯದ ಜನರ ಹಿತಾಸಕ್ತಿ, ಅಭಿವೃದ್ಧಿ ದೂರದೃಷ್ಟಿ ಹೊಂದಿದ್ದಾರೆ ಎಂದರು. ಮುಖ್ಯಮಂತ್ರಿ ಬದಲಿ ಆಗುತ್ತಾರೆ ಎಂದು ಯಾರು ಹೇಳಿದ್ದಾರೊ ಅವರನ್ನೇ ಕೇಳಬೇಕು. ಯಾರೊ ಹೇಳಿದ್ದಕ್ಕೆ ನಾನೇಕೆ ಪ್ರತಿಕ್ರಿಯಿಸಬೇಕು ಎಂದರು.

Exit mobile version