ಮುಳ್ಳುಹಂದಿ ಬೇಟೆಯಾಡಲು ಗುಹೆಗೆ ನುಗ್ಗಿದ್ದ ಇಬ್ಬರು ಉಸಿರುಗಟ್ಟಿ ಸಾವು

0
22

ಚಿಕ್ಕಮಗಳೂರು: ಮುಳ್ಳುಹಂದಿ ಬೇಟೆಗೆ ಹಂದಿಗಳ ಗುಹೆಯೊಳಗೆ ತೆರಳಿದ್ದ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ‌ ಮೃತರನ್ನು ತಮಿಳುನಾಡು ಮೂಲದ ಕಾರ್ಮಿಕ ಗೋವಿಂದರಾಜು (30) ವಿಜಯ್ ಕುಮಾರ್ (29) ಎಂದು ಗುರುತಿಸಲಾಗಿದೆ.
ಕಾಫಿ ತೋಟದ ಕೆಲಸಕ್ಕೆ ತಮಿಳುನಾಡಿನಿಂದ ಬಂದಿದ್ದ ನಾಲ್ವರು ಕಾರ್ಮಿಕರು ಮಾಳಿಗನಾಡು ಸಮೀಪದ ಆನೆಗುಂದಿ ಎಸ್ಟೇಟ್‌ನ ಸಮೀಪದ ಬೆಟ್ಟದ ಸುರಂಗದಲ್ಲಿ ಮುಳ್ಳುಹಂದಿ ಹಿಡಿಯುಲು ತೆರಳಿದ್ದರು. ಈ ವೇಳೆ ಗುಹೆಯ ಒಳೆಗೆ ಮಣ್ಣು ಕುಸಿತವಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರು ಮೃತದೇಹಗಳನ್ನ ಹೊರತೆಗೆದಿದ್ದಾರೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleದಾವಿವಿಯಿಂದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ
Next articleಸುಪ್ರೀಂ ಮೆಟ್ಟಿಲೇರಿದ ಸಿಸೋಡಿಯಾ