Home ನಮ್ಮ ಜಿಲ್ಲೆ ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ರೈತರ ಸಾವು

ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ರೈತರ ಸಾವು

0
118
current-shock

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ವರದಿಗಳ ಪ್ರಕಾರ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ದೌಡಾಯಿಸಿದ್ದು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.