ಯುದ್ಧಪೀಡಿತ ಇಸ್ರೇಲ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹಾಯವಾಣಿ ಆರಂಭ

0
11

ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಬಂಡುಕೋರರ ನಡುವೆ ಕದನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿರುವ ಉತ್ತರ ಕನ್ನಡದ ಜನತೆಗಾಗಿ ಸಹಾಯವಾಣಿ ಆರಂಭಿಸಿದ್ದಾರೆ, ಈ ಕುರಿತು ಜಿಲ್ಲಾಧಿಕಾರಿಗಳ ಅಧಿಕೃತ ಖಾತೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು “ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಭಾರತದ ಪ್ರಜೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟವರು ಇದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 1077 / 08382-229857 / ಮೊ. ನಂ: 9483511015 ಕ್ಕೆ ಕರೆಮಾಡಿ ಮಾಹಿತಿ ನೀಡುವಂತೆ ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಕ್ಕೆ ಮಾಹಿತಿ ನೀಡುವಂತೆ ಕೋರಲಾಗಿದೆ” ಎಂದು ತಿಳಿಸಿದ್ದಾರೆ.

Previous articleಭೀಕರ ಅಪಘಾತ: ಒಂದೇ ಕುಟುಂಬದ ಏಳು‌ ಜನ ದುರ್ಮರಣ
Next articleಡಿಜೆ ಅಬ್ಬರಕ್ಕೆ ಯುವಕನಿಗೆ ಹೃದಯಾಘಾತ