ಮಂಗಳೂರು: ಯುವ ಕಲಾವಿದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಿತ್ತಮಜಲು ನಿವಾಸಿ ಚಿತ್ರ ಕಲಾವಿದ ಸಾಗರ್ ಆಚಾರ್ಯ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 8.30 ರ ವೇಳೆ ಮನೆಯಂಗಳದಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಸಾಗರ್ ಕಳೆದ ಎರಡು ವರ್ಷಗಳ ಹಿಂದೆ ಬಿಸಿರೋಡಿನ ಸಿ.ಡಿ.ಪಿ.ಓ. ಕಚೇರಿಯಲ್ಲಿ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ಈತನಿಗೆ ಮೊದಲೇ ಇದ್ದ ಕಿಡ್ನಿ ಸಮಸ್ಯೆ ಉಲ್ಬಣಿಸಿತು. ಈತ ಕೆಲಸ ಬಿಟ್ಟು ಮನೆಯಲ್ಲೇ ಇದ್ದ. ಎರಡೂ ಕಿಡ್ನಿಗಳು ವಿಫಲವಾದಾಗ ಈತನ ತಂದೆಯ ಒಂದು ಕಿಡ್ನಿಯನ್ನು ನೀಡಲಾಯಿತು.
ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಿ. ಮರದ ಕೆಲಸ ಮಾಡುತ್ತಿರುವ ಈತನ ತಂದೆ ಮಗನಿಗೆ ಕಿಡ್ನಿ ದಾನ ಮಾಡಿದ ನಂತರ ಕೆಲಸ ಮಾಡಲು ಸ್ವಲ್ಪ ಕಷ್ಟದ ಸ್ಥಿತಿ ಉಂಟಾಗಿತ್ತು. ಈ ನಡುವೆ ಮನೆಯಲ್ಲಿ ತಾಯಿಗೂ ಸ್ವಲ್ಪ ಅನಾರೋಗ್ಯದ ಸಮಸ್ಯೆ ಉಂಟಾಗಿತ್ತು. ಮನೆಯಲ್ಲಿ ಎಲ್ಲರೂ ಅನಾರೋಗ್ಯ ಪೀಡಿತರಾಗಿ, ಸರಿಯಾದ ಉದ್ಯೋಗವೂ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಮನನೊಂದು ಸ್ನೇಹಿತರ ಬಳಿ ಹೇಳಿಕೊಂಡಿದ್ದಾರೆ.