ಕಲಬುರಗಿ: ಜಿಲ್ಲೆಯ ಚಿತ್ತಾಪುರದ ಹಲಕರ್ಟಾ ಬಳಿ ಟ್ಯಾಂಕರ್ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಸುದ್ದಿ ತಿಳಿದು ಅತೀವ ನೋವುಂಟಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಅಪಘಾತದಲ್ಲಿ ಮೃತಪಟ್ಟವರೆಲ್ಲ ನನ್ನ ಮತಕ್ಷೇತ್ರ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದವರಾಗಿದ್ದು, ಅವರ ಕುಟುಂಬ ವರ್ಗಕ್ಕೆ ಈ ಕಠಿಣ ಸಂದರ್ಭದಲ್ಲಿ ನನ್ನ ತೀವ್ರ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.