Home ನಮ್ಮ ಜಿಲ್ಲೆ ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಭದ್ರತೆಯಿಲ್ಲ: ಡಿ.ಕೆ.ಶಿ ವ್ಯಂಗ್ಯ

ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಭದ್ರತೆಯಿಲ್ಲ: ಡಿ.ಕೆ.ಶಿ ವ್ಯಂಗ್ಯ

0

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಭದ್ರತೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪುತ್ತೂರು ಪ್ರವಾಸ ಮಾಡಬೇಕಿತ್ತು. ಆದರೆ ಅಲ್ಲಿನ ರೋಡ್ ಶೋ ಅನ್ನು ಕಾನೂನು ಸುವ್ಯವಸ್ಥೆ ಕಾರಣದಿಂದ ರದ್ದು ಮಾಡಿದ್ದಾರೆ. ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಕಾನೂನು ರಕ್ಷಣೆ ಇಲ್ಲ ಎಂದರೆ ಜನ ಸಾಮಾನ್ಯರ ಪರಿಸ್ಥಿತಿ ಏನಾಗಬೇಕು? ಎಂದು ರಾಜ್ಯದ ಜನರಿಗೆ ಕೇಳಬಯಸುತ್ತೇನೆ. ರಾಜ್ಯಕ್ಕೆ ಇದಕ್ಕಿಂತ ದೊಡ್ಡ ಅಪಮಾನ ಬೇರೆ ಏನು ಬೇಕು? ಪ್ರಶ್ನಿಸಿದರು.

Exit mobile version